ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ…

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರು ಬಂಟ್ವಾಳ ಇದರ ದ್ವಿತೀಯ ವಾರ್ಷಿಕೋತ್ಸವವು ಶ್ರೀಮಹಾಗಣಪತಿ ಕ್ಷೇತ್ರ ಸೌತಡ್ಕದ ಶ್ರಿ ಗಣೇಶ ಸಭಾ ಭವನದಲ್ಲಿ ದಶಂಬರ 17 ರಂದು ಪೂರ್ವಾಹ್ನ 10 ಗಂಟೆಯಿಂದ ಜರಗಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣಪತಿ ಸನ್ನಿಧಿಯಲ್ಲಿ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್.ಎಂ ಬಿಡುಗಡೆಗೊಳಿಸಿದರು.
ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪುರಂದರ ಕಡೀರ ,ಪ್ರಶಾಂತ ಪೂವಾಜೆ, ವಿಠಲ ಕುರ್ತಿ, ಅರ್ಚಕರಾದ ಸುಬ್ರಹ್ಮಣ್ಯ ತೊಡ್ತಿಲ್ಲಾಯ, ಕಾರ್ಯನಿರ್ವಹಣಾಧಿಕಾರಿ ಕೆ .ವಿ.ಶ್ರೀನಿವಾಸ ,ಬಾಲಕೃಷ್ಣ ನೈಮಿಷ, ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುತ್ತೂರು ಘಟಕದ ಸಂಚಾಲಕ ಉಮೇಶ ಶೆಣೈ. ಎನ್ ಉಪ್ಪಿನಂಗಡಿ ,ಶ್ರೀಮತಿ ಶ್ರೀದೇವಿ ಭಟ್ ಕಯ್ಯೂರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

whatsapp image 2023 12 02 at 9.10.17 pm

Sponsors

Related Articles

Back to top button