ಶ್ರೀರಾಮ ಶಾಲೆಯಲ್ಲಿ ಬೆಳಕಿನ ಹಬ್ಬದ ಆಚರಣೆ….
ಬಂಟ್ವಾಳ:“ದೀಪಾವಳಿ ಎಂದಾಕ್ಷಣ ಮನೆ ಮುಂದೆ ಉರಿಯುವ ಹಣತೆ, ಪಟಾಕಿ ಸದ್ದು ಅದಷ್ಟೇ ಮೇಲ್ನೋಟಕ್ಕೆ ಕಾಣಸಿಗುವುದು. ಆದರೆ ಈ ಹಬ್ಬದ ಆಚರಣೆ ಹಿಂದೆ ಹಲವು ಪುರಾಣ ಕಾಲದ ಕತೆ, ಸಂಪ್ರದಾಯ, ಸಂಸ್ಕøತಿ ಇದೆ. ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು ಅಜ್ಞಾನವೆಂಬ ಕತ್ತಲೆಯನ್ನು ಅಳಿಸಿ ಬೆಳಕೆಂಬ ಜ್ಞಾನವನ್ನು ಪಸರಿಸುವ ಬೆಳಕಿನ ಹಬ್ಬವಾಗಿದೆ ಎಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಸುಮಂತ್ ಆಳ್ವ ಹೇಳಿದರು.
ಅವರು ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಬೆಳಕಿನ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳು ದೀಪಪ್ರಜ್ವಲನೆ ಮಾಡಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು. ನಂತರ ವೇದವ್ಯಾಸ ಮಂದಿರದಲ್ಲಿ ವಿದ್ಯಾರ್ಥಿಗಳನ್ನು ಸಾಲಾಗಿ ಕುಳ್ಳಿರಿಸಿ ಅವರ ಕೈಗೆ ಮಣ್ಣಿನ ಹಣತೆ ನೀಡಲಾಯಿತು. ನಂತರ ಎಲ್ಲಾ ಅಧ್ಯಾಪಕರು ಆ ಹಣತೆಯನ್ನು ಜ್ಞಾನದ ಸಂಕೇತವಾಗಿ ಉರಿಸಿದರು. ವಿದ್ಯಾರ್ಥಿನಿಯರಾದ ಆದಿಶ್ರೀ ಹಾಗೂ ಅನಘಾ ಪ್ರೇರಣಾ ಗೀತೆ ಹಾಡಿದರು. ಈ ರೀತಿಯಾಗಿ ವಿಶೇಷ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಕಲ್ಲಡ್ಕ ಶ್ರಿರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ನಿರ್ವಹಿಸಿದರು. ಹಾಗೂ ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.