ಪ್ಲಾಟಿಂಗ್ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ಕoದಾಯ ಅದಾಲತ್ ಮಾಡಿ ಸಮಸ್ಯೆ ಬಗೆ ಹರಿಸುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ರಿಗೆ ಮನವಿ…

ಬೆಂಗಳೂರು: ಕಂದಾಯ ಸಚಿವರಾಗಿ ಅಧಿಕಾರವಹಿಸಿಕೊಂಡ ಕೃಷ್ಣಬೈರೇಗೌಡ ಇವರನ್ನು ಸುಳ್ಯದ ಕಾಂಗ್ರೆಸ್ ಪಕ್ಷದ ಮುಖಂಡರು ಭೇಟಿ ಮಾಡಿ ಕಳೆದ ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಮಿಯ ಪೋಡಿ ದುರಸ್ಥಿ, ಪ್ಲಾಟಿಂಗ್ ಸಮಸ್ಯೆ ಯಿಂದಾಗಿ ರೈತರಿಗೆ ಮನೆ ಕಟ್ಟುವವರಿಗೆ ತುಂಬಾ ಸಮಸ್ಯೆ ಉಂಟಾಗಿದ್ದು ಅದನ್ನು ಪರಿಹರಿಸುವರೇ ಜಿಲ್ಲಾ ಮಟ್ಟದ ಕಂದಾಯ ಅದಾಲತ್ ಏರ್ಪಡಿಸಿ ದ. ಕ ಮತ್ತು ಉಡುಪಿ ಜಿಲ್ಲೆಗೆ ಪ್ರತ್ಯೇಕ ನೀತಿಯನ್ನು ರೂಪಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಸುಳ್ಯದ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್,ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button