ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ದಕ್ಷಿಣ ವಲಯ ಅಂತರ್ ವಿವಿ ಪುರುಷರ ಕ್ರೀಡಾಕೂಟಕ್ಕೆ ಕೀರ್ತಿರಾಜ್.ಕೆ.ಎಸ್ ಆಯ್ಕೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಜಾವೆಲಿನ್ ಥ್ರೋ ವಿಭಾಗದಲ್ಲಿ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಡಿಸೆಂಬರ್ 29 ರಿಂದ ಜನವರಿ 1ರವರೆಗೆ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾನಿಲಯ ಚೆನ್ನೈ ಇದರ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button