ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ವರ್ಣೋತ್ಸವದಲ್ಲಿ ಚಾಂಪಿಯನ್…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಬಂಟಕಲ್ಲಿನ ಶ್ರೀ ಮಾಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಹಬ್ಬ ವರ್ಣೋತ್ಸವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ಮಾರ್ಗದರ್ಶನದಲ್ಲಿ ಒಟ್ಟು 35 ವಿದ್ಯಾರ್ಥಿಗಳ ತಂಡವು ಇದರಲ್ಲಿ ಪಾಲ್ಗೊಂಡಿತ್ತು. ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಬಾಗವಹಿಸಿದ ವಿದ್ಯಾರ್ಥಿಗಳು 5 ವಿಭಾಗಗಳಲ್ಲಿ ಪ್ರಥಮ ಹಾಗೂ 2 ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡು ಒಟ್ಟು ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಭೂಮಿಕಾ ಕಲಾ ಸಂಘದ ಸಂಯೋಜಕರಾದ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಡಾ.ಶ್ವೇತಾಂಬಿಕಾ.ಪಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.