ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ…

ಬಂಟ್ವಾಳ:ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ ಕವಿ ಜಯಾನಂದ ಪೆರಾಜೆ ಅಧಿಕಾರ ಸ್ವೀಕರಿಸಿದರು.
ಪ್ರಸ್ತುತ ಎಸ್.ವಿ.ಎಸ್.ದೇವಳ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಇವರು ರಾಜ್ಯ ಮತ್ತು ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಬಂಟ್ವಾಳ ತಾಲೂಕು ಕನ್ನಡ‌ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿರುವ ಇವರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದಾರೆ.
ಹಿರಿಯ ಸಾಹಿತಿಯಾಗಿ ಗುರುತಿಸಲ್ಪಟ್ಟಿರುವ ಇವರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹಲವು ಸಾಹಿತ್ಯಗೋಷ್ಠಿಗಳಲ್ಲಿ ಭಾಗವಹಿಸಿರುತ್ತಾರೆ. ಇವರ ಭಾವ ಬಿಂದು ಕವನಸಂಕಲನವು ಕಥಾಬಿಂದು ಪ್ರಕಾಶನದಿಂದ ನೇಪಾಳ ದೇಶದಲ್ಲಿ ಬಿಡುಗಡೆಯಾಗಿತ್ತು.
ಹಿರಿಯ ಪತ್ರಕರ್ತರಾಗಿರುವ ಇವರು ಆರಂಭದಲ್ಲಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ವರದಿಗಾರರಾಗಿದ್ದು ಬಳಿಕ ಮುಂಗಾರು,ಸಂಯುಕ್ತ ಕರ್ನಾಟಕ,ಕನ್ನಡ ಪ್ರಭ ದಿನ ಪತ್ರಕೆಗಳ ಬಂಟ್ವಾಳ ತಾಲೂಕು ವರದಿಗಾರರಾಗಿ ಕಾರ್ಯ ನಿರ್ಹಿಸಿದ್ದಾರೆ. ಈಗ ಹೊಸದಿಗಂತ ಮತ್ತು ನವ್ಯವಾಣಿ ಪತ್ರಿಕೆಗಳ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗಮಂದಿರದಲ್ಲಿ
ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಸಂಸ್ಥಾಪಕ ಡಾ.ವಾಮನ ರಾವ್ ಬೇಕಲ್ ಪದಗ್ರಹಣ ಸಮಾರಂಭ ಏರ್ಪಡಿದಿದ್ದರು.
ಹಿರಿಯ ಕವಿ ವಿ.ಬಿ.ಕುಳಮರ್ವ‌ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ರಾಜ್ಯ ಸಂಚಾಲಕಿಯಾಗಿ ಡಾ. ಶಾಂತಾ ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕವಿ ವಿರಾಜ್ ಅಡೂರು ಹಾಗೂ ವಿವಿಧ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಅವರು ಮುಖ್ಯ ಅತಿಥಿಯಾಗಿದ್ದರು.
ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ , ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಡಾ. ವೆಂಕಟ್ರಮಣ ಹೊಳ್ಳ, ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಕವಯಿತ್ರಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ. ಎ. ಶ್ರೀನಾಥ್ , ಕಾರ್ಯದರ್ಶಿ ವಸಂತ ಕೆರೆಮನೆ ಭಾಗವಹಿಸಿದ್ದರು. ಪತ್ರಕರ್ತ
ವಿರಾಜ್ ಅಡೂರು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು. ನರಸಿಂಹ ಭಟ್ ಏತಡ್ಕ ವಂದಿಸಿದರು.

whatsapp image 2025 02 09 at 12.02.43 am

Sponsors

Related Articles

Back to top button