ಸಂಪಾಜೆಯ ನಿಯೋಗದಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ…
ಬೆಂಗಳೂರು: ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಸಂಪಾಜೆಯ ನಿಯೋಗ ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿ ಮಾಡಿ ವಿವಿಧ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು.
ಸುಳ್ಯ ತಾಲೂಕಿನಲ್ಲಿ ಆನೆ ಹಾವಳಿ, ದಕ್ಷಿಣ ಕನ್ನಡ ಜಿಲ್ಲೆಗೆ ಎಲಿಫೆಂಟ್ ಟಾಸ್ಕ್ ಫೋರ್ಸ್ ನೇಮಕ, ಕೃಷಿಕರಿಗೆ ಈ ಭಾಗದಲ್ಲಿ ಆನೆ ಹಾವಳಿಯಿಂದ ವ್ಯಾಪಕ ಹಾನಿಯಾಗಿದ್ದು ಪರಿಹಾರ ಧನ ಒದಗಿಸುವುದು, ಸೋಲಾರ್ ಬೇಲಿ ನಿರ್ಮಾಣಕ್ಕೆ ಸಹಾಯದನ ಹೆಚ್ಚಳ, ಸಂಪಾಜೆ ಗ್ರಾಮದ ಸ್ಮಶಾನ ಜಾಗದ ಸಮಸ್ಯೆಗಳು, ಕಸ ವಿಲೇವಾರಿ ಜಾಗದ ಸಮಸ್ಯೆಗಳು, ದಿನ ನಿತ್ಯ ಸಾರ್ವಜನಿಕರು, ಶಾಲಾ ಮಕ್ಕಳು ಭಯದಲ್ಲಿ ತೇರಳಬೇಕಾದ ಸಮಸ್ಯೆ ಇದ್ದು ಸಚಿವರ ಗಮನಕ್ಕೆ ತರಲಾಯಿತು.
ಸಚಿವರು ಮನವಿ ಸ್ವೀಕರಿಸಿದ ನಂತರ ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ಕೆಪಿಸಿಸಿ ವಕ್ತಾರರಾದ ಟಿ. ಎಂ. ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ.ಕೆ. ಹಮೀದ್ ಗೂನಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ, ಯುವ ಕಾಂಗ್ರೆಸ್ ಮುಖಂಡ ರಂಜಿತ್ ರೈ ಮೇನಾಲ, ಸಲೀಂ ಪೆರುಂಗೋಡಿ, ಉನೈಸ್ ಗೂನಡ್ಕ, ಸೌಕತ್ ಮೇನಾಲ ನಿಯೋಗದಲ್ಲಿದ್ದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜಾವೀದ್ ಅಕ್ತರ್ ಉಪಸ್ಥಿತರಿದ್ದರು.