ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ರವರಿಂದ ಪೇರಡ್ಕ ಜುಮಾ ಮಸ್ಜಿದ್ ಹಾಗೂ ದರ್ಗಾ ಭೇಟಿ…

ಸುಳ್ಯ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯುದ್ದಿನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿ ಇತಿಹಾಸ ಕೇಳಿ ಹಳೆಯ ಮಸೀದಿ ಮತ್ತು ಪೇರಡ್ಕ ದರ್ಗಾದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಈ ಭಾಗದ ಮುಸ್ಲಿಮರು ಮಸೀದಿ ಹಾಗೂ ದರ್ಗಾದಲ್ಲಿ ಭಯ ಭಕ್ತಿ ಶಿಸ್ತು ಉಳ್ಳವರು ಹಾಗೂ ಧಾರ್ಮಿಕ ತಿಳುವಳಿಕೆ ಉಳ್ಳವರು ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ. ಎಂ ಶಾಹಿದ್ ತೆಕ್ಕಿಲ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಮಹಮದ್ ಕುಂಞಿ ತೆಕ್ಕಿಲ್, ಮಸೀದಿ ಕಾರ್ಯದರ್ಶಿ ಉಸ್ಮಾನ್, ಪಾಂಡಿ ಅಬ್ಬಾಸ್, ಸಾಧುಮೋನ್ ತೆಕ್ಕಿಲ್ ಪೇರಡ್ಕ ಜುರೈದ್ ತೆಕ್ಕಿಲ್ , ಖಲಿಲ್,ಮುನೀರ್ ದಾರಿಮಿ. ಹಸೈನಾರ್ ಮುಸ್ಲಿಯಾರ್ ಜುನೈದ್ ತೆಕ್ಕಿಲ್, ಮೂಸನ್, ಮೊದಲಾದವರು ಉಪಸ್ಥಿತರಿದ್ದರು.

whatsapp image 2024 02 01 at 4.50.02 pm

whatsapp image 2024 02 01 at 4.50.04 pm

Sponsors

Related Articles

Back to top button