ಬಂಟ್ವಾಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪೂರ್ವಭಾವಿ ಸಭೆ…
ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ಬಂಟ್ವಾಳ ತಾಲೂಕಿನಲ್ಲಿ ರಚನೆಯಾಗಲಿರುವ 90 ನೇ ಬಂಟ್ವಾಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪೂರ್ವಭಾವಿ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಫೆ. 6 ರಂದು ನಡೆಯಿತು.
ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರೋನಾಲ್ಡ್ ಡಿಸೋಜಾ ರವರು ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು.
ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ್ ಶೌರ್ಯ ವಿಪತ್ತು ತಂಡದ ರಚನೆ, ಉದ್ದೇಶ, ಅಧಿಕಾರ, ಕಾರ್ಯ ವ್ಯಾಪ್ತಿಗಳ ಬಗ್ಗೆ ಪೂರ್ಣ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜನಜಾಗೃತಿ ಕಾರ್ಯಕ್ರಮದ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ, ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕರಾದ ನಿತೇಶ್ ಕೆ, ಹಾಗೂ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಗೆ ಸೇರಿದ ವಲಯಗಳ ಶೌರ್ಯ ವಿಪತ್ತು ತಂಡದ ಸದಸ್ಯರುಗಳು ಉಪಸ್ಥಿತರಿದ್ದರು.