ಮಂಗಳೂರಿನ ಯೆಯ್ಯಾಡಿಯಲ್ಲಿ ಸರಣಿ ಅಪಘಾತ…
ಮಂಗಳೂರು: ಯೆಯ್ಯಾಡಿ ಸಮೀಪ ಮರಳು ಸಾಗಾಟದ ಲಾರಿ, ಕಾರು ಹಾಗು ಕಾಲೇಜು ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಮಂಗಳೂರಿನಿಂದ ಪದವಿನಂಗಡಿಗೆ ಹೋಗುತ್ತಿದ್ದ ಕಾರಿಗೆ ಮರಳು ಸಾಗಾಟದ ಲಾರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿದ್ದ ಕಾಲೇಜು ಬಸ್ಸಿಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಈ ಸರಣಿ ಅಪಘಾತದಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು, ಕಾರಿಗೆ ಹೆಚ್ಚು ಹಾನಿ ಸಂಭವಿಸಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ.