ಸುಳ್ಯದಲ್ಲಿ ಬಿಜೆಪಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ…..

ಸುಳ್ಯ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಬಿಜೆಪಿ ವತಿಯಿಂದ ರಾಷ್ಟ್ರದಾದ್ಯಂತ ನಡೆಯುತ್ತಿರುವ ಗಾಂಧಿ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದಲ್ಲಿ ಪಾದಯಾತ್ರೆ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು. ಸುಳ್ಯದ ಪೈಚಾರ್ ಮತ್ತು ಅರಂಬೂರಿನಿಂದ ಏಕ ಕಾಲದಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ ಆರಂಭಗೊಂಡಿತು. ಶಾಸಕ ಎಸ್.ಅಂಗಾರ ಪೈಚಾರ್ ನಲ್ಲಿ ಗಾಂಧಿ ಯಾತ್ರೆಗೆ ಚಾಲನೆ ನೀಡಿದರು. ಎರಡೂ ಕಡೆಯಿಂದ ಪಾದಯಾತ್ರೆ ನಗರದ ರಥಬೀದಿಯಲ್ಲಿ ಸಂಗಮಿಸಿ ಕೇರ್ಪಳದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸಮಾಪನಗೊಂಡಿತು. ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಗಾಂಧಿ ಟೋಪಿ ಧರಿಸಿ ರಾಷ್ಟ್ರ ಧ್ವಜ ಹಿಡಿದು ಪಾದಯಾತ್ರೆಯಲ್ಲಿ ಪಾಲ್ಗೊಂಡರು.

IMG 20191101 WA0015 300x225

IMG 20191101 WA0019 300x225

Related Articles

Leave a Reply

Your email address will not be published. Required fields are marked *