ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ನಾಲ್ವರು ವಿದ್ಯಾರ್ಥಿನಿಯರು ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನಾಲ್ವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತೃತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮಂಜುಶ್ರೀ.ಎ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ ಹಾಗೂ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ ಇವರು
ಮಹಾರಾಷ್ಟ್ರದ ನಾಂದೇಡ್ ವಿಷ್ಣುಪುರಿಯ ರಮಾನಂದ ತೀರ್ಥ ಮರಾಠವಾಡ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ.
ಈ ಮೊದಲು ಕೋಲಾರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.