ಬಾಲಕನಿಗೆ ಬೆಂಕಿ ಅವಘಡ – ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಆಸ್ಪತ್ರೆಗೆ ಭೇಟಿ…

ಬಂಟ್ವಾಳ: ಶಂಭೂರು ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕಸವನ್ನು ವೇಳೆ ಹೊತ್ತಿಸುವ ವೇಳೆ ಅಪ್ರಾಪ್ತ ಶಾಲಾ ಬಾಲಕನೋರ್ವನಿಗೆ ಬೆಂಕಿ ತಾಗಿದ್ದು, ಬೆಂಕಿಯಿಂದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ.
ಮಾ. 1 ರಂದು ಶಂಭೂರು ಶಾಲಾ ಆವರಣದಲ್ಲಿ ಘಟನೆ ನಡೆದಿದ್ದು, ಬಳಿಕ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು .
ಇದೀಗ ಆಸ್ಪತ್ರೆಗೆ ಬೇಟಿ ನೀಡಿದ ಶಾಸಕ ರಾಜೇಶ್ ನಾಯ್ಕ್ ಅವರು ಘಟನೆಯ ಬಗ್ಗೆ ಬಾಲಕನಿಂದ ಮಾಹಿತಿ ಪಡೆದಿದ್ದಾರೆ.
ಈ ಬಗ್ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದಲೂ ಮಾಹಿತಿ ಕೇಳಿ ಪಡೆಯುದಾಗಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಬೇಟಿ ನೀಡಿದ ಸಂದರ್ಭದಲ್ಲಿ ವೈಯಕ್ತಿಕವಾಗಿ ಧನಸಹಾಯ ಮಾಡಿದಲ್ಲದೆ ಧೈರ್ಯ ತುಂಬಿದ್ದಾರೆ.
ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.