ಮಾಜಿ ಸಚಿವ, ಕಲ್ಯಾಣ ಕರ್ನಾಟಕದ ಕನಸುಗಾರ ವೈಜನಾಥ ಪಾಟೀಲ್ ವಿಧಿವಶ..

ಕಲಬುರಗಿ: ಮಾಜಿ ಸಚಿವ, 371ಜೆ ವಿಧಿ ತಿದ್ದುಪಡಿ ಜಾರಿ ಹೋರಾಟಗಾರ ವೈಜನಾಥ ಪಾಟೀಲ್(82) ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ 1984ರಲ್ಲಿ ತೋಟಗಾರಿಕೆ ಹಾಗೂ ಎಚ್. ಡಿ. ದೇವೆಗೌಡ ಸಂಪುಟದಲ್ಲಿ 1994ರಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪಾಟೀಲ್ ಅವರ ಮನಸ್ಸು ಸದಾ ಮಿಡಿಯುತ್ತಿತ್ತು. ಈ ಭಾಗದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿ ಜಾರಿಗೆ ಆಗ್ರಹಿಸಿ ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ರೂಪಿಸಿದವರೇ ವೈಜನಾಥ ಪಾಟೀಲ್. 371 ಜೆ ವಿಧಿ ಜಾರಿಯಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಏನಾದರೂ ಅನ್ಯಾಯವಾದರೆ ತಕ್ಷಣವೇ ಸರಕಾರದ ಗಮನ ಸೆಳೆಯುತ್ತಿದ್ದ ವೈಜನಾಥ ಪಾಟೀಲ್ ಅವರು ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದರು.

Images 300x201Vaijanathc55 300x205

Related Articles

Leave a Reply

Your email address will not be published. Required fields are marked *