ಮಂಗಳೂರು ದಕ್ಷಿಣ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ ಟಿ.ಎಂ ಶಹೀದ್ ತೆಕ್ಕಿಲ್ ನೇಮಕ…
ಸುಳ್ಯ: ಮುಂಬರುವ ಲೋಕಸಭಾ ಚುನಾವಣಿಯಲ್ಲಿ ಮತ್ತು ಪಕ್ಷ ಸಂಘಟನೆ ಬಲಿಷ್ಠಗೊಳಿಸಲು ಹಾಗು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಲು ಮಂಗಳೂರು ಲೋಕಸಭಾ ಕ್ಷೇತ್ರದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾಕ್ಷೇತ್ರ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ಕೆ.ಪಿ.ಸಿ.ಸಿ. ಉಸ್ತುವಾರಿಯಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಕೆ.ಪಿ.ಸಿ.ಸಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ.
ತೆಕ್ಕಿಲ್ ಮನೆತನದ ಟಿ. ಎಂ ಶಾಹಿದ್ ತೆಕ್ಕಿಲ್ ಎನ್.ಎಸ್.ಯು.ಐ ನ ತಾಲ್ಲೂಕು ಜಿಲ್ಲೆ ಮತ್ತು ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಅಲ್ಪಸಂಖ್ಯಾತರ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಹಾವೇರಿ ಜಿಲ್ಲೆಯ ಹಿರೆಕೆರೂರು,ಬ್ಯಾಡಗಿ,ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ, ದ .ಕ ಜಿಲ್ಲೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೆ.ಪಿ.ಸಿ.ಸಿ ಯ ಕೊಡಗು ಜಿಲ್ಲಾ ಸದಸ್ಯ ನೋಂದಣಿಯ ಉಸ್ತುವಾರಿಯಾಗಿದ್ದರು. ಸದಸ್ಯತ್ವ ನೋಂದಣಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ದ.ಕ ಜಿಲ್ಲೆಯಲ್ಲಿ ಗರಿಷ್ಠ ಸದಸ್ಯರನ್ನ ನೋಂದಾಯಿಸಿದ್ದು ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪ್ಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿದ್ದರು. ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ,ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ,ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದಸ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ಸಂಪಾಜೆಯ ಗೂನಡ್ಕ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿ , ಕರ್ನಾಟಕ ರಾಜ್ಯ ಮುಸ್ಲಿಂ ಯೂತ್ ಕೌನ್ಸಿಲ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಹಲವಾರು ಸಾಮಾಜಿಕ, ರಾಜಕೀಯ, ಕ್ರೀಡೆ, ಧಾರ್ಮಿಕ, ಶಿಕ್ಷಣ, ಉದ್ಯಮ, ಕೃಷಿ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ. ಇವರು ಪ್ರತಿಷ್ಠಿತ ತೆಕ್ಕಿಲ್ ಮನೆತನದವರು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರು, ಇತಿಹಾಸ ಪ್ರಸಿದ್ಧ ಸಂಪಾಜೆ ಪೇರಡ್ಕ- ಗೂನಡ್ಕ ಮುಹಿಯದ್ಧೀನ್ ಜುಮಾ ಮಸೀದಿಯ ಅಧ್ಯಕ್ಷರು, ಹಾಗು ಅರಂತೋಡು ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ನ ಗೌರವಾಧ್ಯಕ್ಷರಾಗಿದ್ದಾರೆ. ಕಳೆದ 36 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ದುಡಿಯುತ್ತಿದ್ದು 2002 ರಲ್ಲಿ ರಾಜ್ಯ ಯುವ ಪ್ರಶಸ್ತಿ ವಿಜೇತರಾಗಿದ್ದರು.