ಯಕ್ಷಧ್ರುವ ಪಟ್ಲ ಫೌಂಡೇಶನ್ – ಬಂಟ್ವಾಳ ತಾಲೂಕು ಘಟಕದ ಸಭೆ…

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಎ.27 ರಂದು ಸಂಜೆ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮೇ.7 ಮಂಗಳವಾರದಂದು ಬಿ.ಸಿ.ರೋಡಿನ ಅನ್ನಪೂರ್ಣೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಬಂಟ್ವಾಳ ಘಟಕದ ಪ್ರಥಮ ವಾರ್ಷಿಕೋತ್ಸವದ ಆಮಂತ್ರಣ ಪತ್ರವನ್ನು ಬಿಡುಗಡೆ ಗೊಳಿಸಲಾಯಿತು. ಬಳಿಕ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು.
ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ, ಪತ್ರಕರ್ತ ರತ್ನದೇವ್ ಪೂಂಜಲಕಟ್ಟೆ, ಕಲಾವಿದ ನಾರಾಯಣ ಸಿ. ಪೆರ್ನೆ ಅನಿಸಿಕೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷರಾದ ಭುಜಂಗ ಸಾಲಿಯಾನ್ ಬಿ.ಸಿ.ರೋಡು, ಜಯಪ್ರಕಾಶ್ ಜಕ್ರಿಬೆಟ್ಟು, ಕೋಶಾಧಿಕಾರಿ ಶಂಕರ ಶೆಟ್ಟಿ ಪರಾರಿಗುತ್ತು ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ವಂದಿಸಿದರು, ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.