ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಡಾಟಾ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಪ್ರೊ.ರೂಪಾ.ಜಿ.ಕೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಎಂಜಿನಿಯರಿಂಗ್ (ಡಾಟಾ ಸೈನ್ಸ್) ವಿಭಾಗದ ಮುಖ್ಯಸ್ಥರಾಗಿ ಪ್ರೊ.ರೂಪಾ.ಜಿ.ಕೆ ಪದ ಸ್ವೀಕಾರ ಮಾಡಿದ್ದಾರೆ.
ಹತ್ತೊಂಭತ್ತು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್, ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್, ಬಿಗ್ ಡೇಟಾ ಎನಲಿಟಿಕ್ಸ್ ಮುಂತಾದ ವಿಷಯಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಸುರತ್ಕಲ್ಲಿನ ಎನ್‍ಐಟಿಕೆಯಲ್ಲಿ ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್ ವಿಷಯದಲ್ಲಿ ಪಿಎಚ್‍ಡಿ ಮಾಡುತ್ತಿದ್ದಾರೆ. ಇವರು ಬರೆದಿರುವ 10 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಜರ್ನಲ್‍ಗಳಲ್ಲಿ ಪ್ರಕಟಗೊಂಡಿವೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Related Articles

Back to top button