ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು-ಆಂಗ್ಲ ಭಾಷಾ ಸಂವಹನ ಕಾರ್ಯಕ್ರಮ…
ಬಂಟ್ವಾಳ: ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ಮೇ.24 ರಂದು ಆಂಗ್ಲ ಭಾಷಾ ಸಂವಹನ ಕಾರ್ಯಕ್ರಮ ಹಾಗೂ ಶಿಕ್ಷಕರ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ನಲ್ಕೆಮಾರ್ ಶಾಲೆಯಿಂದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ಶ್ರೀಮತಿ ರೇಖಾ ರಾವ್ ಸಂಸ್ಥೆಯ ಶಿಕ್ಷಕರಿಗೆ ಆಂಗ್ಲ ಭಾಷಾ ಸಂವಹನವನ್ನು ಹೇಗೆ ನಡೆಸುವುದು, ವಿದ್ಯಾರ್ಥಿಗಳೊಂದಿಗೆ ಉತ್ತಮ ರೀತಿಯ ಆಂಗ್ಲಭಾಷೆ ಸಂವಹನ ನಡೆಸಲು ಬೇಕಾಗುವಂತಹ ಕ್ರಿಯಾಶೀಲತೆಯನ್ನು ಹೇಗೆ ಬೆಳೆಸಿಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಕಾಶ್ ಅಂಚನ್ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಸ್ಥೆಯ ಮುಂದಿನ ಪ್ರಗತಿಗೆ ನಾವು ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿ ಶಿಕ್ಷಕರಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಅಂಚನ್, ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ್ ಅಂಚನ್, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ರಮಾನಂದ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ, ವಿನ್ನಿ ಸಿ0ತಿಯ, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ರಾಮಚಂದ್ರ ಕರೆಂಕಿ, ಸಂಸ್ಥೆಯ ಹಿರಿಯ ಶಿಕ್ಷಕಿ ಶ್ರೀಮತಿ ಹಿಲ್ಡಾ ಫೆರ್ನಾಂಡಿಸ್, ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಪ್ರಕಾಶ್ ಅಂಚನ್ ಉದ್ಘಾಟಿಸಿ, ಪುರುಷೋತ್ತಮ್ ಅಂಚನ್ ಸ್ವಾಗತಿಸಿ, ಸಂಸ್ಥೆಯ ಶಿಕ್ಷಕಿ ಶ್ರೀಮತಿ ಕುಮಾರಿ ವಂದಿಸಿದರು.