ಸಹ್ಯಾದ್ರಿಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಿಂಚನಾ-2019 ಕಾರ್ಯಕ್ರಮ…..

ಮಂಗಳೂರು:ಕನ್ನಡ ರಾಜ್ಯೋತ್ಸವ ಅಂಗವಾಗಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮತ್ತು ವೈವಿಧ್ಯಮಯ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಸಿಂಚನಾ-2019 ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಿಕ್ಷಕ ವಿಠ್ಠಲ್ ನಾಯಕ್ ಮಾತನಾಡಿ, ಪ್ರತಿಯೊಂದು ಭಾಷೆಗೆ ತನ್ನದೇ ಆದ ಶಕ್ತಿ ಇದೆ ಎಂದರಲ್ಲದೆ, ಕನ್ನಡ ಸಾಹಿತ್ಯದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ರಾವ್ ಕುಂಟೆ, ಭಂಡಾರಿ ಪ್ರತಿಷ್ಠಾನದ ಟ್ರಸ್ಟಿ ದೇವದಾಸ್ ಹೆಗ್ಡೆ ಮತ್ತು ಉಪ ಪ್ರಾಂಶುಪಾಲರಾದ ಪ್ರೊ. ಎಸ್. ಎಸ್. ಬಾಲಕೃಷ್ಣ ಅವರು ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಮತ್ತು ವರ್ಣರಂಜಿತ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಿತು.

Sahyadri Sinchana 2019 E 300x168

Sahyadri Sinchana 2019 I 300x166

Related Articles

Leave a Reply

Your email address will not be published. Required fields are marked *