ಅರಂತೋಡು- ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ…

ಸುಳ್ಯ: ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್ ಗಂಗಾಧರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಉಪನ್ಯಾಸಕರ ಮಾರ್ಗದರ್ಶನವನ್ನು ಬಳಸಿಕೊಂಡು ಅತ್ಯುತ್ತಮ ವ್ಯಕ್ತಿತ್ವವುಳ್ಳ ವಿದ್ಯಾರ್ಥಿಗಳಾಗಿ ರೂಪುಗೊಳ್ಳಬೇಕೆಂದು ಕರೆ ನೀಡಿದರು.
ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿ, ಕಾಲೇಜಿನ ಸೌಲಭ್ಯಗಳು, ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿ, ಶುಭಹಾರೈಸಿದರು.
ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಸಾಯನಶಾಸ್ತ್ರ ಉಪನ್ಯಾಸಕ ಲಿಂಗಪ್ಪ ಪೂಜಾರಿ ವಂದಿಸಿದರು.ಸಂಸ್ಥೆಯ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

whatsapp image 2024 06 01 at 9.09.03 pm (1)

Related Articles

Back to top button