ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಪರಿಸರ ದಿನಾಚರಣೆ…

ಸುಳ್ಯ: ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಭಾಗಿಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಆಡಳಿತ ಮಂಡಳಿಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ, ಗೌರವಾಧ್ಯಕ್ಷರಾದ ತಾಜ್ ಮುಹಮ್ಮದ್ ರವರು ಉಪಸ್ಥಿತರಿದ್ದು ದಿನದ ಮಹತ್ವದ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

whatsapp image 2024 06 05 at 1.30.45 pm

Sponsors

Related Articles

Back to top button