ಅರಂತೋಡು ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ…

ಸುಳ್ಯ: ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರು ಸುರೇಶ್ ವಾಗ್ಲೆ ವಿಶ್ವ ಪರಿಸರ ದಿನದ ಸಂದೇಶ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮ ಕುಮಾರ್ ವಂದಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಲಿಂಗಪ್ಪ.ಎಂ ಸಹಕರಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿಶ್ವ ಪರಿಸರ ದಿನದ ಅಂಗವಾಗಿ ಕಾಲೇಜಿನ ಅವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.