SDPI ಇದರ 16ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮ…

ಸುಳ್ಯ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಇದರ 16ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮ ಗಳನ್ನು ಜೂನ್ 21 ರಂದು ಹಮ್ಮಿಕೊಳ್ಳಲಾಗಿದೆ.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಗಳಲ್ಲಿ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರದ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಕೊಟ್ಯಾಡಿ ಟರ್ಫ್ ನಲ್ಲಿ ಆಟೋಟ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪಕ್ಷದ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿಯವರಾದ ಶರೀಫ್ ನಿಂತಿಕಲ್ಲು ರವರು ತಿಳಿಸಿದ್ದಾರೆ.