ಅರಂತೋಡು – ಸ್ವಸ್ಥ ಮನಸ್ಸಿನ ನಿರ್ಮಾಣಕ್ಕೆ ಯೋಗ ಸಹಕಾರಿ-ಸುರೇಶ್ ವಾಗ್ಲೆ…

ಸುಳ್ಯ: ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಸುರೇಶ್ ವಾಗ್ಲೆ ತರಬೇತಿ ನೀಡಿ, ಯೋಗ ಸ್ವಸ್ಥ ಮನಸ್ಸಿನ ನಿರ್ಮಾಣಕ್ಕೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಯೋಗವನ್ನು ಅಭ್ಯಾಸ ಮಾಡಿದಾಗ ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಪದ್ಮಕುಮಾರ್ ಮತ್ತು ಚಂದ್ರಶೇಖರ ಸಹಕರಿಸಿದರು. ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತರಬೇತಿ ಪಡೆದುಕೊಂಡರು.