ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗೂನಡ್ಕ – ಯೋಗ ದಿನಾಚರಣೆ…

ಸುಳ್ಯ: ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗೂನಡ್ಕ ಇಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ ಹಾಗೂ ಗೌರವ ಅಧ್ಯಕ್ಷರಾದ ತಾಜ್ ಮಹಮ್ಮದ್ ರವರು ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಅವರು ತಮ್ಮ ಮಾತುಗಳಲ್ಲಿ ಯೋಗವು ಜೀವನದ ಪ್ರಮುಖ ಭಾಗವಾಗಿದ್ದು, ನೆಮ್ಮದಿಯ ಜೀವನಕ್ಕೆ ಬಹಳಷ್ಟು ಸಹಾಯಕಾರಿ ಮತ್ತು ವಿದ್ಯಾರ್ಥಿಗಳು ಶಾಲಾ ಹಂತದ ಕಲಿಕೆಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ಹಾಗೂ ಶಿಕ್ಷಕ ವೃಂದದವರಾದ ಸಾಧಿಕಾ, ನೌಫಿಯಾ,ಮೆಹೆಖ್ನಾಜ್, ತೌಸೀನಾ ಮಿಸ್ರಿಯಾ ಜಂಶೀರಾ ಸುನೈನಾ, ಸಫ್ರೀನಾ, ಸೋನಿಯಾ, ಸಫಾ ಮತ್ತು ಶಾಲಾ ಶಿಕ್ಷಕ ವೃಂದದವರೆಲ್ಲರೂ ವಿದ್ಯಾರ್ಥಿಗಳೊಂದಿಗೆ ಯೋಗಾಸನಗಳನ್ನು ಮಾಡಿ ಅದನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ನಿರ್ಧಾರದೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು.