“ಯಕ್ಷ ಧ್ರುವ- ಯಕ್ಷ ಶಿಕ್ಷಣ ” ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ 2024-25 …

ಬಂಟ್ವಾಳ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವು ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಮಣಿನಾಲ್ಕೂರು ಇಲ್ಲಿ ನಡೆಯಿತು.
ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷರಾದ ಶ್ರೀ ಶಶಿಕಾಂತ್ ಶೆಟ್ಟಿ ಆರುಮುಡಿ ಇವರಿಂದ ಉದ್ಘಾಟಿಸಲ್ಪಟ್ಟಿತು.
ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಸುಧಾ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕರು, ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರಾದ ಶ್ರೀ ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿಯಾದ ಶ್ರೀ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷರಾದ ಶ್ರೀ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷರುಗಳಾದ ಶ್ರೀ ರಾಜೇಶ್ ಶೆಟ್ಟಿ, ಹಾಗೂ ಶ್ರೀ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ರವರು ಉಪಸ್ಥಿತರಿದ್ದರು. ಶಿಕ್ಷಕರಾದ ಉದಯ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು.
ಶಾಲಾ ಶಿಕ್ಷಕಿ ಶ್ರೀಮತಿ ರಾಜೇಶ್ವರಿ .ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಕಿ ಕುಮಾರಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಶ್ರೀಮತಿ ಸಾಯಿ ಸುಮರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕರಾದ ಶ್ರೀ ಪ್ರಕಾಶ್ ಟಿ , ಶಿಕ್ಷಕಿ ಕುಮಾರಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

Sponsors

Related Articles

Back to top button