ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟಿ. ಎಂ. ಶಹೀದ್ ತೆಕ್ಕಿಲ್ ಗೆ ಸನ್ಮಾನ…

ಸುಳ್ಯ: ಕೆಪಿಸಿಸಿ ಪ್ರದಾನ ಕಾರ್ಯದರ್ಶಿಯಾಗಿ ನೇಮಕಗೊಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ, ತೆಕ್ಕಿಲ್ ಮಾಡೆಲ್ ಸ್ಕೂಲ್ ನ ಸ್ಥಾಪಕ ಟಿ. ಎಂ. ಶಹೀದ್ ರಿಗೆ ಸುಳ್ಯದಲ್ಲಿ ಜು. 6 ರಂದು ಏರ್ಪಡಿಸಲಾದ ಸಾರ್ವಜನಿಕ ಸನ್ಮಾನ ಸಮಾರಂಭ ದಲ್ಲಿ ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು, ಹಾರ, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನoದ ಮಾವಜಿ, ಮಲೆನಾಡು ಟ್ರಸ್ಟ್ ಗೌರವಾಧ್ಯಕ್ಷ ಮುಸ್ತಫ, ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್ಸ್, ಶರೀಫ್ ಜಟ್ಟಿಪ್ಪಳ್ಳ ಮೊದಲಾದವರು ಉಪಸ್ಥಿತರಿದ್ದರು.