ಪೆರ್ನೆ ಬಿಳಿಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ…
‘ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು’ - ಜಯಾನಂದ ಪೆರಾಜೆ...
ಬಂಟ್ವಾಳ ಜು.6 :ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೆರ್ನೆ ವಲಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡ ಪೆರ್ನೆ ವಲಯದ ವತಿಯಿಂದ ಬಿಳಿಯೂರು ಮಾಡತ್ತಾರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಜಯಾನಂದ ಪೆರಾಜೆ ಮಾತನಾಡಿ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಹದಿಹರೆಯದಲ್ಲಿ ವಿದ್ಯಾರ್ಥಿಗಳು ಕೆಟ್ಟ ಅಭ್ಯಾಸಗಳಿಗೆ ಬಲಿಯಾಗದಂತೆ ಹಿರಿಯರ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕು ಎಂದರು.
ಸಾಮಾಜಿಕ ಕಾರ್ಯಕರ್ತ ಉಮನಾಥ ಶೆಟ್ಟಿ ಪೆರ್ನೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯೋಜನೆಯ ಕರ್ವೇಲು ಒಕ್ಕೂಟದ ಅಧ್ಯಕ್ಷ ಮಹೇಶ್ ಪಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪೆರ್ನೆ ಗ್ರಾ.ಪಂ ಸದಸ್ಯ ತನಿಯಪ್ಪ ಪೂಜಾರಿ , ನವೀನ್ ಕುಮಾರ್ ಪದಬರಿ , ವಲಯ ಮೇಲ್ವಿಚಾರಕಿ ಶಾರದಾ ಸ್ವಾಗತಿಸಿ ಪ್ರಸ್ತಾವನೆ ಗೈದರು. ಸೇವಾ ಪ್ರತಿನಿಧಿ ಹಸ್ಮಿತಾ ವಂದಿಸಿದರು.