ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ….
ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆಯಿತು.
ಮಾನವನನ್ನು ದಾನವನನ್ನಾಗಿ ಮಾಡುವುದೇ ಮಾದಕ ವ್ಯಸನ. ಇಂತಹ ಮಾದಕ ವ್ಯಸನದಿಂದ ಸಮಾಜ ಮುಕ್ತವಾಗಬೇಕಾದರೆ ಮೊದಲು ತನ್ನನ್ನು ತಾನು ವ್ಯಸನದಿಂದ ದೂರವಿರುವಂತೆ ಮನಸ್ಸನ್ನು ಹತೋಟಿಯಲ್ಲಿಡಬೇಕು.ಇದರಿಂದ ಮಾತ್ರ ಇಡೀ ಸಮಾಜವನ್ನು ಸ್ವಾಸ್ಥ್ಯ ಸಮಾಜವನ್ನಾಗಿಸಬಹುದು ಎಂದು ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಜಯರಾಮ ಪೂಜಾರಿ ಮಕ್ಕಳನ್ನು ಈ ಸಂದರ್ಭದಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ವಿಟ್ಲ ವಲಯದ ಯೋಜನಾಧಿಕಾರಿ ಮೋಹನ್, ಕಲ್ಲಡ್ಕ ವಲಯದ ಜನಜಾಗೃತಿಯ ಅಧ್ಯಕ್ಷೆ ಜಯಂತಿ ಪೂಜಾರಿ, ಜನಜಾಗೃತಿ ಸದಸ್ಯರಾದ ವೆಂಕಟರಮಣ ಪ್ರಭು, ಸೇವಾ ಪ್ರತಿನಿಧಿಯಾದ ಸುಜಾತ, ಶ್ರೀರಾಮ ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿಕುಮಾರಿ, ಪ್ರೌಢಶಾಲಾ ಶಿಕ್ಷರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಶಿಕ್ಷಕ ವಿನೋದ್ ಶೆಟ್ಟಿ ಸ್ವಾಗತಿಸಿ, ಕಲ್ಲಡ್ಕ ವಲಯದ ಮೇಲ್ವಿಚಾರಕಿ ಪ್ರೇಮ ವಂದಿಸಿದರು.