ಕೊಯನಾಡು ಸರಕಾರಿ ಶಾಲಾ ಮೇಲೆ ಬರೆ ಕುಸಿತ- ಟಿ.ಎಮ್ ಶಹೀದ್ ತೆಕ್ಕಿಲ್ ಭೇಟಿ…

ಸುಳ್ಯ: ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಹಿಂಬದಿ ನಿರಂತರ ಮಳೆಗೆ ಭಾರಿ ಪ್ರಮಾಣದಲ್ಲಿ ಗುಡ್ಡೆ ಕುಸಿತಗೊಂಡು ತರಗತಿ ಕೊಠಡಿಗಳ ಮೇಲೆ ಬಿದ್ದು ಹಾನಿಯಾದ ಪ್ರದೇಶಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಭೇಟಿ ನೀಡಿ ಹಾನಿಯಾದ ಕಟ್ಟಡ ಮತ್ತು ತರಗತಿ ಕೊಠಡಿಗಳನ್ನು ವೀಕ್ಷಿಸಿದರು.
ಹಾನಿಯಾದ ಶಾಲಾ ಕಟ್ಟಡಕ್ಕೆ ಸೂಕ್ತ ಪರಿಹಾರಕ್ಕಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಶಾಸಕರಾದ ಪೊನ್ನಣ್ಣರವರನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂಧರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಮತಿ ಶಕ್ತಿಮೇಲು, ಉಪಾಧ್ಯಕ್ಷ ಎಸ್.ಕೆ ಹನೀಫ್ ಉಪಸ್ಥಿತರಿದ್ದರು.
ಅಧಿಕಾರಿಗಳಿಗೆ ಸುರಕ್ಷತೆ ಬಗ್ಗೆ ಹೆಚ್ಚು ಗಮನಹರಿಸಿ ಮಕ್ಕಳ ಆರೋಗ್ಯ ಮತ್ತು ಸುರಕ್ಷೆ ಬಗ್ಗೆ ಮುಂಜಾಗ್ರತ ಕ್ರಮ ವಹಿಸಲು ಸ್ಥಳದಲ್ಲಿದ್ದ ತಹಶೀಲ್ದಾರ್ ಮತ್ತು ಜಿಲ್ಲಾ ಶಿಕ್ಷಣಧಿಕಾರಿಗಳಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ವಿನಂತಿಸಿದರು.