ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ…

ಸುಳ್ಯ: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞೆ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ 700 ವಿದ್ಯಾರ್ಥಿಗಳು ಪ್ರತಿಜ್ಞೆ ವಿಧಿ ಸ್ವೀಕರಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ, ಸ್ಕೌಟ್ ಶಿಕ್ಷಕ ಮನೋಜ್ ಸಹಕರಿಸಿದರು.