ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಅವರ ಕಚೇರಿ ಶುಭಾರಂಭ…
ಮಂಗಳೂರು: ದಕ್ಷಿಣ ಕನ್ನಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಅವರ ಕಚೇರಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಆ. 14 ರಂದು ಆರಂಭಗೊಂಡಿತು.
ಸುಳ್ಯ ಗುತ್ತಿಗಾರಿನ ಯಶಸ್ವಿ ಕುಶಲಕರ್ಮಿ ಮಹಿಳೆ ಲೀಲಾವತಿ ಅಪ್ಪಯ್ಯ ಆಚಾರ್ಯ ಅವರು ಕಚೇರಿ ಉದ್ಘಾಟಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮಾತನಾಡಿ ಸರಕಾರದ ಮುಖ್ಯಸ್ಥರಾದ ಸಿದ್ಧರಾಮಯ್ಯ ಹಾಗೂ ಪಕ್ಷದ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಯೋಜನೆ ಪ್ರಾರಂಭವಾಗಿದ್ದು, ಸರಕಾರವನ್ನು ಮತ್ತು ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.
ಸರಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಯಿಂದ ಜನರಿಗೆ ಪ್ರಯೋಜನವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಹೇಳಿದರು.
ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಮಾತನಾಡಿ ಗ್ಯಾರಂಟಿ ಯೋಜನೆ ಜನರಿಗೆ ಶಕ್ತಿ ನೀಡಿದೆ. ಪಕ್ಷಕ್ಕೆ ಬಲ ನೀಡಿದೆ. ಮುಂದೆ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಪಕ್ಷಕ್ಕೆ ಹೆಚ್ಚು ಲಾಭವಾಗಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರಾಜೀವಿ ಆರ್. ರೈ, ಕೆ.ಪಿ.ಥಾಮಸ್, ಗೇರುಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ಪಿ.ಸಿ. ಜಯರಾಮ್, ನಿತ್ಯಾನಂದ ಮುಂಡೋಡಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಾಧಿಕಾರದ ಉಪಾಧ್ಯಕ್ಷ ಜೋಕಿಂ ಡಿಸೋಜ ವಂದಿಸಿದರು.