ಶ್ರೀರಾಮ ಪದವಿ ಕಾಲೇಜಿನಲ್ಲಿ ನ್ಯಾಕ್ ಕಾರ್ಯಾಗಾರ….
ಬಂಟ್ವಾಳ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ, ಕಲ್ಲಡ್ಕ ಇದರ ದಶಮಾನೋತ್ಸವದ ಅಂಗವಾಗಿ ಐಕ್ಯುಎಸಿ ಘಟಕದ ಸಹಭಾಗಿತ್ವದಲ್ಲಿ ನ. 6 ರಂದು ನ್ಯಾಕ್ ಸಂಯೋಜನೆಯ ಬಗ್ಗೆ ಒಂದು ದಿನದ ಕಾರ್ಯಗಾರವು ಪ್ರೇರಣಾ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪ್ರಥಮದರ್ಜೆ ಕಾಲೇಜು ಜಯನಗರ, ಬೆಂಗಳೂರು ಇಲ್ಲಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕ ಡಾ. ಎಲ್.ಎನ್. ಶೇಷಗಿರಿ ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಗಾರವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇಲ್ಲಿನ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಉದ್ಘಾಟಿಸಲಿದ್ದಾರೆ. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಅಧ್ಯಕ್ಷ ನಾರಾಯಣ ಸೋಮಯಾಜಿ ಹಾಗೂ ಸರಕಾರಿ ಪ್ರಥಮದರ್ಜೆ ಕಾಲೇಜು, ವಾಮದಪದವು ಇಲ್ಲಿನ ಸಹಾಯಕ ಪ್ರಾಧ್ಯಾಪಕ ಡಾ. ರವಿ ಎಮ್.ಎನ್ ಇವರು ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ನ್ಯಾಕ್ ನಿರ್ದೇಶಕರು, ಐಕ್ಯುಎಸಿ ನಿರ್ದೇಶಕರು ಮತ್ತು ಉಪನ್ಯಾಸಕರು ಭಾಗವಹಿಸಬಹುದು ಹಾಗೂ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ ಮತ್ತು ಭಾಗವಹಿಸುವವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.