ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ- 78ನೇ ಸ್ವಾತಂತ್ರ್ಯ ದಿನಾಚರಣೆ…

ಸುಳ್ಯ: ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಮನ ಮೆಚ್ಚುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲಾಯಿತು . ಶಿಕ್ಷಕ- ರಕ್ಷಕರ ಸಂಘ ರಚಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ, ಮುಖ್ಯ ಶಿಕ್ಷಕರಾದ ಸಂಪತ್ ಜೆ ಡಿ, ಶಿಕ್ಷಕ ವೃಂದದವರು , ಪೋಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದವರಿಗೆ ಸಿಹಿತಿಂಡಿ ಹಂಚಲಾಯಿತು.

whatsapp image 2024 08 15 at 6.03.17 pm

Sponsors

Related Articles

Back to top button