ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಆದೇಶ – ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ…
ಮಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಪಾಲರ ಮೂಲಕ ಸ್ವಚ್ಛ ಆಡಳಿತಗಾರರಾದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿರುದ್ಧ ತನಿಖೆಗೆ ಆದೇಶ ನೀಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ಮಂಗಳೂರಿನಲ್ಲಿ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ -ಶಾಸಕರುಗಳಾದ ಪ್ರಕಾಶ್* ರಾಥೋಡ್, ಐವನ್ ಡಿ ‘ಸೋಜಾ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಟಿ. ಎಂ. ಶಹೀದ್, ಮಿಥುನ್ ರೈ, ಇನಾಯತ್ ಅಲಿ, ಎಂ. ಎಸ್. ಮಹಮ್ಮದ್, ಜಿ ಎ ಬಾವ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಗಟ್ಟಿ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಮತ್ತಿತರರು ಭಾಗವಹಿಸಿದರು.