ಆ.22 – 24: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವೆಲಪ್ ಮೆಂಟ್ ಪ್ರೋಗ್ರಾಮ್…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮವನ್ನು ಆ.22 ರಿಂದ 24 ರ ವರೆಗೆ ಏರ್ಪಡಿಸಲಾಗಿದೆ.
ಉತ್ತಮ ಸಂಶೋಧನಾ ಸಂಸ್ಕೃತಿಯನ್ನು ಪರಿಚಯಿಸಿಕೊಳ್ಳುವುದು, ಸಹಯೋಗದ ಸಂಶೋಧನೆಯ ಅಳವಡಿಕೆ ಮತ್ತು ನಿಧಿಯ ಅವಕಾಶಗಳು, ನಿಖರವಾದ ಮತ್ತು ವಿಮರ್ಶಾತ್ಮಕವಾದ ಸಂಶೋಧನಾ ಪ್ರಬಂಧಗಳ ಬರವಣಿಗೆ, ಸಂಶೋಧನಾ ಪ್ರಸ್ತಾಪದ ಅಭಿವೃದ್ಧಿಯ ಬಗ್ಗೆ ಜಾಗೃತಿ ಮೂಡಿಸುವುದು ಇದೇ ಮುಂತಾದ ವಿಷಯಗಳ ಬಗ್ಗೆ ಸಂಶೋಧನಾ ನಿರತರಿಗೆ ಮಾಹಿತಿಯನ್ನು ನೀಡುವುದಕ್ಕಾಗಿ ಇದನ್ನು ಆಯೋಜಿಸಲಾಗಿದೆ.
ಆಗಸ್ಟ್ 22 ರಿಂದ 24ರ ವರೆಗೆ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು ರಾಜ್ಯಾದ್ಯಂತ ವಿವಿಧ ಕಾಲೇಜುಗಳ ಸಂಶೊಧನಾ ನಿರತ ಪ್ರಾಧ್ಯಾಪಕರು ಇದರಲ್ಲಿ ಪಾಲ್ಗೊಳ್ಳುತ್ತಾರೆ.
ದಿನಾಂಕ 22 ರಂದು ಬೆಳಿಗ್ಗೆ 9.30ಕ್ಕೆ ಇದರ ಉದ್ಘಾಟನೆಯು ನಡೆಯಲಿದ್ದು ಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚೆನ್ನಬಸಪ್ಪ.ಬಿ.ಅಕ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಶ್ರೀ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ.
ಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚೆನ್ನಬಸಪ್ಪ.ಬಿ.ಅಕ್ಕಿ, ವಿಟಿಯು ಬೆಳಗಾವಿಯ ಸಂಶೋಧನಾ ಸಂಯೋಜಕ ಡಾ.ಆರ್.ಎಚ್.ಗೌಡರ್, ವಿಟಿಯು ಬೆಳಗಾವಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಗಳಾದ ಡಾ.ಸಂತೋಷ್.ಎಲ್.ದೇಶಪಾಂಡೆ, ಡಾ.ಮಹಂತೇಶ್.ಎನ್.ಬಿರ್ಜೆ, ಕೆನರಾ ಇಂಜಿನಿಯರಿಂಗ್ ಕಾಲೇಜು ಬಂಟ್ವಾಳ ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಡೇಮಿಯನ್ ಆಂಟೊನಿ ಡಿ’ಮೆಲ್ಲೋ ಮತ್ತು ಎನ್‍ಐಟಿಕೆ ಸುರತ್ಕಲ್ಲಿನ ಪ್ರೊಫೆಸರ್ ಡಾ.ಪುಷ್ಪರಾಜ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿದ್ದು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಅವರ ಮುಂದಾಳುತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಿಕೆಗೆ ಮತ್ತು ಹೆಚ್ಚಿನ ಮಾಹಿತಿಗೆ ಡಾ.ಜೀವಿತ.ಬಿ.ಕೆ 9880185386 ಅಥವಾ ಪ್ರೊ.ಕೃಷಮೋಹನ್.ಎ.ಜೆ 9844613782 ಅವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Back to top button