ಅರಂತೋಡು ಸ್ವಚ್ಚತಾ ಅಭಿಯಾನ…

ಸುಳ್ಯ: ಆರಂತೋಡು ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಆ.25 ರಂದು ಅರಂತೋಡು ಪೇಟೆಯಲ್ಲಿ ನಡೆಯಿತು.
ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು -ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಂಘ -ಸಂಸ್ಥೆಗಳ ಪ್ರತಿನಿಧಿಗಳು, ಆರಂತೋಡು ಪರಿಸರದ ನಾಗರಿಕರು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.