ಅಖಿಲ ಭಾರತ ಬ್ಯಾರಿ ಪರಿಷತ್ ಉಪಾಧ್ಯಕ್ಷರಾಗಿ ಟಿ.ಎಂ ಶಹೀದ್ ತೆಕ್ಕಿಲ್ ಆಯ್ಕೆ…

ಮಂಗಳೂರು:ಅಖಿಲ ಭಾರತ ಬ್ಯಾರಿ ಪರಿಷತ್ ನ ಉಪಾಧ್ಯಕ್ಷರಾಗಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಆಯ್ಕೆಯಾಗಿರುತ್ತಾರೆ.
ಇವರು ಕಳೆದ ಮೂರು ದಶಕಗಳಿಂದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯರಾಗಿ, ಕಾರ್ಮಿಕ ಮಂಡಳಿಯ ಸದಸ್ಯರಾಗಿ, ರಾಜ್ಯ ಅರಣ್ಯ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಸಂಖ್ಯಾತಕರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ, ಪ್ರಸ್ತುತ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಏಳೂವರೆ ವರ್ಷ ಅಲ್ಪ ಸಂಖ್ಯಾತರ ವಿವಿದ್ದೊದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವುದಲ್ಲದೆ ಪ್ರಸ್ತುತ ಸಂಪಾಜೆ ಗೂನಡ್ಕ ಮುಹಿದ್ಧೀನ್ ಜುಮಾ ಮಸೀದಿ ಪೇರಡ್ಕ ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಇತ್ತೀಚಿಗೆ ಯೂಸುಫ್ ವಕ್ತಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.