ಟಿ.ಎಂ ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿ- ಡಾ. ಪುರುಷೋತ್ತಮ ಬಿಳಿಮಲೆಯವರಿಗೆ ಸನ್ಮಾನ…

ಶಿಕ್ಷಣ ಸಂಸ್ಥೆಗಳು ಆಧುನಿಕ ಶಿಕ್ಷಣಕ್ಕೆ ಒತ್ತು ನೀಡಬೇಕು- ಬಿಳಿಮಲೆ...

ಸುಳ್ಯ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆಯವರು ಟಿ.ಎಂ ಶಹೀದ್ ತೆಕ್ಕಿಲ್ ರವರ ನಿವಾಸಕ್ಕೆ ಸೆ.2 ರಂದು ಬೇಟಿ ನೀಡಿದರು. ಹಿಂದೆ ನಡೆದ ಟಿ.ಎಂ ಶಹೀದ್ ತೆಕ್ಕಿಲ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಟಿ.ಎಂ ಶಹೀದ್ ತೆಕ್ಕಿಲ್ ರವರನ್ನು ಡಾ| ಪುರುಷೋತ್ತಮ ಬಿಳಿಮಲೆಯವರು ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಟಿ.ಎಂ ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿ ವತಿಯಿಂದ ಡಾ. ಪುರುಷೋತ್ತಮ ಬಿಳಿಮಲೆಯವರನ್ನ ಸನ್ಮಾನಿಸಲಾಯಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಡಾ| ಪುರುಷೋತ್ತಮ ಬಿಳಿಮಲೆ ಅವರು ಟಿ.ಎಂ ಶಹೀದ್ ತೆಕ್ಕಿಲ್ ರವರು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿರುವುದಲ್ಲದೆ ಸಾಮಾಜಿಕ ಚಟುವಟಿಕೆಗಳಿಂದ ಕ್ರೀಯಾಶೀಲರಾಗಿದ್ದಾರೆ. ರಸ್ತೆ, ಸೇತುವೆ, ಶಿಕ್ಷಣ ಸಂಸ್ಥೆ, ಸಮುದಾಯ ಭವನಗಳಿಗೆ ಸರಕಾರದಿಂದ ಅನುದಾನವನ್ನು ಒದಗಿಸಿಕೊಟ್ಟಿರುವುದು ಶ್ಲಾಘನೀಯ. ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆಗಳು ಆಧುನಿಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಬೀದರ್ ನಲ್ಲಿರುವ ಶಾಹೀನ್ ಶಿಕ್ಷಣ ಸಂಸ್ಥೆ ಉತ್ತಮ ಆಧುನಿಕತೆಯ ಶಿಕ್ಷಣವನ್ನು ನೀಡುತ್ತಿದೆ. ಮುಸಲ್ಮಾನರು ಇಂಗ್ಲೀಷರ ವಿರುದ್ಧ ಹೋರಾಟ ಮಾಡಿದರು ಆದರೆ ಇಂಗ್ಲೀಷ್ ಭಾಷೆಯನ್ನು ಕಲಿಯಲಿಲ್ಲ, ಉರ್ದು ಶಾಲೆಗಳನ್ನು ತೆರೆದರು. ಮದರಸದಲ್ಲಿಯು ಕನ್ನಡವನ್ನು ಕಲಿಸಬೇಕೆಂಬ ಒತ್ತಾಸೆ ನಮ್ಮದು. ಮುಸ್ಲಿಮರಲ್ಲಿ ಅನೇಕ ಕನ್ನಡ ಪಾಂಡಿತ್ಯವುಳ್ಳ ಲೇಖಕರು ಸಾಹಿತಿಗಳು ಇದ್ದಾರೆ ಎಂದರು.
ನಿವೃತ್ತ ಪ್ರಾಂಶುಪಾಲ ಪೂವಪ್ಪ ಕಣಿಯೂರು ಶುಭ ಹಾರೈಸಿ, ಟಿ.ಎಂ ಶಹೀದ್ ತೆಕ್ಕಿಲ್ ರವರ ಸಾಮಾಜಿಕ ಶೈಕ್ಷಣಿಕ ಸೇವಾ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.
ಕರ್ನಾಟಕ ಸರ್ಕಾರದ ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಟಿ.ಎಮ್ ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿ ಸಂಚಾಲಕ ಕೆ.ಟಿ.ವಿಶ್ವನಾಥ್, ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯ ಸಿದ್ಧೀಕ್ ಕೊಕ್ಕೊ, ಲಕ್ಷೀಶ ಗಬ್ಬಲಡ್ಕ, ಲೇಖಕಿ ಸಹನಾ ಕಾಂತಬೈಲು, ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಸಂಪತ್, ಮಹ್ಮದ್ ಆರಿಫ್, ಶಿಕ್ಷಕಿಯರಾದ ಸಾಧಿಕಾ, ಆಯಿಷತ್ತುಲ್ ಸುನೈನಾ, ಮಿಶ್ರಿಯ, ಆಯಿಷತುಲ್ ನೌಫಿಯ, ಮೆಹ್ತನಾಝ್ ಮೊದಲಾದವರು ಉಪಸ್ಥಿತರಿದ್ದರು.

whatsapp image 2024 09 02 at 5.15.06 pm

Sponsors

Related Articles

Back to top button