ರಾಯಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ-ಕೋಟ ಶ್ರೀನಿವಾಸ ಪೂಜಾರಿ ಭೇಟಿ…

ಬಂಟ್ವಾಳ: ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ. 1 ರಂದು ರಾಯಿಯ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಹಾಗೂ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
ನವೀಕೃತಗೊಳ್ಳುತ್ತಿರುವ ಈ ಮಂದಿರ ಕೇರಳದ ಶಿವಗಿರಿ ದೇವಾಲಯದ ಮಾದರಿಯಲ್ಲಿ ಬಹಳ ಸುಂದರವಾಗಿ ನಿರ್ಮಾವಾಗುತ್ತಿರುವ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶೀಘ್ರವಾಗಿ ಮಂದಿರ ಹಾಗೂ ಸಮುದಾಯ ಭವನದ ಲೋಕಾರ್ಪಣೆ ನಡೆಯಲಿ, ಭವ್ಯವಾದ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಅವರು ಭರವಸೆ ನೀಡಿದರು.
ಅವರು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುವ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರಾಯಿ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಸಿದ್ದಕಟ್ಟೆ ವ್ಯವಸಾಯ ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ್ ಪ್ರಭು, ರಾಯಿ ಬಿಲ್ಲವ ಸಮಾಜ ಸೇವಾ ಸಂಘದ( ರಿ.)ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆ ಗುತ್ತು, ರಾಯಿ ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ್ ಆಚಾರ್ಯ ರಾಯಿ ಉಪಸ್ಥಿತರಿದ್ದರು.