ಅರಂತೋಡು-ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ…

ಸುಳ್ಯ: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಎನ್ಎಸ್ಎಸ್ ಘಟಕದ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಶಿಕ್ಷಕರ ದಿನಾಚರಣೆಯ ಸಂದೇಶವನ್ನು ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ ಎಂ ಮತ್ತು ಭಾಗ್ಯಶ್ರೀ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಎಸ್ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.