ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರಿಗೆ ರಾಜ್ಯಮಟ್ಟದ “ಶಿಕ್ಷಕರತ್ನ” ಪ್ರಶಸ್ತಿ …

ಬಂಟ್ವಾಳ: ಕಲಾ ಸಂಕುಲ ಸಂಸ್ಥೆ (ರಿ.) ರಾಯಚೂರು ಇವರ ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ರಾಯಚೂರು ನಗರದ ರಂಗಮಂದಿರದಲ್ಲಿ ಸೆ. 8 ರಂದು ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಯ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರಿಗೆ “ಶಿಕ್ಷಕರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪಠ್ಯೇತರ ಚಟುವಟಿಕೆಗಳು ಹಾಗೂ ಶಾಲಾ ಭೌತಿಕ ಅಭಿವೃದ್ಧಿಗೆ ತೊಡಗಿಸಿಕೊಂಡು ಸಮುದಾಯದ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವುದನ್ನು ಗುರುತಿಸಿ ರಾಜ್ಯಮಟ್ಟದ “ಶಿಕ್ಷಕರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಸಣ್ಣ ನೀರಾವರಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸುರಾಜು ಹಾಗೂ ರಾಯಚೂರು ಸಂಸದರಾದ ಜಿ ಕುಮಾರ್ ನಾಯಕ್ ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷರಾದ ರೇಖಾ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.