ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಶಿಕ್ಷಕರ ದಿನಾಚರಣೆ…

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ISTE ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಅವರು ಶಿಕ್ಷಕರು ಜ್ಞಾನವನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಾರೆ. ಪಠ್ಯಪುಸ್ತಕಗಳನ್ನು ಮೀರಿದ ಮೌಲ್ಯಗಳನ್ನು ತುಂಬುತ್ತಾರೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ಪಾತ್ರವು ಇನ್ನಷ್ಟು ಹೆಚ್ಚಿನದ್ದಾಗಿದೆ. ನೈಜ ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಕೌಶಲ್ಯ ಮತ್ತು ಮನಸ್ಥಿತಿಯನ್ನು ಅಭಿವೃದ್ಧಿಪಡಿಸಲು ಶಿಕ್ಷಕರು ಸಹಾಯ ಮಾಡುತ್ತಾರೆ. ಶಿಕ್ಷಕರ ಸಮರ್ಪಣೆ, ತಾಳ್ಮೆ ಮತ್ತು ಬೆಂಬಲದಿಂದಾಗಿ ಸಂಸ್ಥೆ ಅಭಿವೃದ್ಧಿ ಹೊಂದಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳಾದ ವಿದ್ಯಾರಣ್ಯ ಶರ್ಮ, ವರ್ಷಾ ನಾಯಕ್, ಸೀಮಾಲಹರಿ, ಸ್ಫೂರ್ತಿ ಲಕ್ಷ್ಮಿ, ಅಶ್ವಿನಿ ಪ್ರಾರ್ಥಿಸಿದರು. ನೇಹಾ, ಸ್ವಸ್ತಿಕ ಕಾರ್ಯಕ್ರಮ ನಿರ್ವಹಿಸಿದರು.