ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮ…
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸೆ.17 ಮತ್ತು 18 ರಂದು ನಡೆಯಿತು.
ಸೆ.17 ರಂದು ನಡೆದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಂಡ್ ಮಷೀನ್ ಲರ್ನಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್(ಡೇಟಾ ಸೈನ್ಸ್) ವಿಭಾಗಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಅವರು ಸಮಯ ನಿರ್ವಹಣೆಯ ಕಲೆ ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾದದ್ದು. ಸಿಕ್ಕಿದ ಸಮಯವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಕೆಲಸಗಳನ್ನು ಪೂರೈಸಿಕೊಳ್ಳಬೇಕು ಎಂದರು.
ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ವಿದ್ಯಾರ್ಥಿಗಳು ಸದಾ ಲವಲವಿಕೆಯಿಂದಿರಬೇಕು, ಬಹಿರ್ಮುಖಿಯಾಗಿರಬೇಕು. ಕಾಲೇಜಿನಲ್ಲಿ ನಡೆಯುವ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.
ಸೆ. 18 ರಂದು ನಡೆದ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವಿಭಾಗಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಅವರು ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ಹೇಳಿದರು.ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ಧಾರಿಗಳನ್ನು ಅರಿತುಕೊಂಡು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದೂ ಅವರು ಹೇಳಿದರು.
ಸೆ. 18 ರಂದು ನಡೆದ ಸಿವಿಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ಮಾತನಾಡಿ ವಿದ್ಯಾರ್ಥಿಗಳು ಶಿಸ್ತಿಗೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಶಿಸ್ತಿನಿಂದ ಕೂಡಿದ ಸುಸಂಸ್ಕೃತ ಜೀವನವು ನಮ್ಮನ್ನು ಸಮಾಜದಲ್ಲಿ ಎತ್ತರದ ಸ್ಥಾನದಲ್ಲಿ ನಿಲ್ಲುವಂತೆ ಮಾಡುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಹಾಗೂ ಕಾಲೇಜಿನ ನಿಯಮ ಮತ್ತು ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ ವಿದ್ಯಾ.ಆರ್.ಗೌರಿ, ವಿವಿಧ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿ, ಪ್ರೊ.ಲತಾ ಮೋಹನ್ ಶೆಟ್ಟಿ ವಂದಿಸಿದರು. ಪ್ರೊ.ಶ್ರೀಶರಣ್ಯ.ಯು.ಆರ್ ಕಾರ್ಯಕ್ರಮ ನಿರ್ವಹಿಸಿದರು. ಪ್ರೊ.ತೇಜಸ್ವಿನಿ.ಎಲ್.ಪಿ, ಪ್ರೊ.ರವಿಶಂಕರ್, ಪ್ರೊ.ಮಾಧವಿ.ಪೈ, ಪ್ರೊ. ರೇಶ್ಮಾ, ಪ್ರೊ.ರವೀಶ್.ಪಿ, ಪ್ರೊ.ಸೌಜನ್ಯ.ಎಂ.ಎಂ ವಿವಿಧ ಜವಾಬ್ಧಾರಿಗಳನ್ನು ನಿರ್ವಹಿಸಿದರು.