ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಜೊತೆ ಕಾರ್ಯದರ್ಶಿಯಾಗಿ ಸುರೇಶ ಕುಮಾರ್ ನೇಮಕ…

ಸುಳ್ಯ: ದುಗ್ಗಲಡ್ಕದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಮಿಕ ನಾಯಕ ಕೃಷ್ಣಸ್ವಾಮಿ ಅವರ ಪುತ್ರ, ಸಕ್ರಿಯ ಕಾರ್ಮಿಕ ಮತ್ತು ಕಾಂಗ್ರೆಸ್ ಮುಖಂಡ ಸುರೇಶ ಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯ ಜೊತೆ ಕಾರ್ಯದರ್ಶಿಯಾಗಿ ರಾಜ್ಯ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ್ ಎಂ ಜೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್, ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರ ಸಲಹೆಯತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅವರ ಶಿಫಾರಸ್ಸಿನ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕ ಮಾಡಲಾಗಿದೆ.