ಸಿಎಂ ಸಿದ್ದರಾಮಯ್ಯ ಕೇರಳಕ್ಕೆ ಆಗಮನ – ಟಿ ಎಂ ಶಾಹಿದ್ ತೆಕ್ಕಿಲ್ ಅವರಿಂದ ಸ್ವಾಗತ…

ಕ್ಯಾಲಿಕಟ್: ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರಿನಲ್ಲಿ ನಡೆಯುವ ಮಾಜಿ ಸಚಿವ ಆರ್ಯಡನ್ ಮೊಹಮ್ಮದ್ ಅನುಸ್ಮರಣೆ ಮತ್ತು ಕೆ ಸಿ ವೇಣುಗೋಪಾಲ್ ಅವರಿಗೆ ಆರ್ಯಡನ್ ಮೊಹಮ್ಮದ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಶೇಷ ವಿಮಾನದಲ್ಲಿ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಸ್ವಾಗತಿಸಿದರು.
ಮುಖ್ಯಮಂತ್ರಿ ಅವರ ಜೊತೆ ಸಚಿವರಾದ ಭೈರತಿ ಸುರೇಶ್, ವೆಂಕಟೇಶ್, ಮುಖ್ಯಮಂತ್ರಿಗಳ ಸಲಹೆಗಾರರಾದ ನಸೀರ್ ಅಹಮದ್, ಗೋವಿಂದರಾಜ್, ಎ ಎಸ್ ಪೊನ್ನಣ್ಣ, ಪ್ರಭಾಕರ್ ಉಪಸ್ಥಿತರಿದ್ದರು.