ಅರಕಲಗೂಡು – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸ್ವಾಗತ…

ಹಾಸನ: ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮತ್ತು ಒಂದು ವರ್ಷಗಳ ಕಾಲ ನಡೆಯುವ “ಗಾಂಧಿ ಭಾರತ” ಕಾರ್ಯಕ್ರಮದ ಬಗ್ಗೆ ನಡೆಯಲಿರುವ ಸಿದ್ಧತಾ ಸಭೆಗೆ ಆಗಮಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಮತ್ತು ಅರಕಲಗೂಡು ನಗರ ಪಂಚಾಯತ್ ಅಧ್ಯಕ್ಷ ಪ್ರದೀಪ್ ಮತ್ತು ಇತರ ಕಾಂಗ್ರೆಸ್ ಮುಖಂಡರು ಅರಕಲಗೂಡು ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು.