ವಿದ್ಯಾಪೋಷಕ್ 20ನೇ ವರ್ಷದ ವಿನಮ್ರ ಸಹಾಯ ಉದ್ಘಾಟನೆ…

ಉಡುಪಿ:ಸೆಪ್ಟೆಂಬರ್ 29, 2024 ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ 20ನೆಯ ವರ್ಷದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಕಿರಿಯ ಸ್ವಾಮೀಜಿ ಶ್ರೀಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಶುಭಹಾರೈಸಿದರು. ಮಣಿಪಾಲ ಮಾಹೆಯ ಉಪಕುಲಪತಿಗಳಾದ ಲೆ. ಜ. (ಡಾ.) ಎಂ. ಡಿ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣಪ್ರಸಾದ್ ಅಡ್ಯಂತಾಯ, ಡಾ. ಜಿ. ಎಸ್. ಚಂದ್ರಶೇಖರ, ಶ್ರೀ ಕೆ. ರಘುಪತಿ ಭಟ್, ಶ್ರೀ ಯು. ವಿಶ್ವನಾಥ ಶೆಣೈ, ಶ್ರೀ ಎಚ್. ನಾಗರಾಜ ಶೆಟ್ಟಿ, ಶ್ರೀ ಕೆ. ಅಶೋಕ್ ನಾಯಕ್, ಶ್ರೀ ಪಿ. ಸದಾನಂದ ಶೆಣೈ, ಶ್ರೀ ಕೆ. ಸದಾಶಿವ ಭಟ್, ಶ್ರೀಮತಿ ವಿಲಾಸಿನಿ ಬಾಬುರಾಯ ಶೆಣೈ, ಶ್ರೀ ಯು. ಎಸ್. ರಾಜಗೋಪಾಲ ಆಚಾರ್ಯ ಇವರ ಗೌರವ ಉಪಸ್ಥಿತಿಯಲ್ಲಿ ಡಾ. ಎಚ್. ಎಸ್. ಶೆಟ್ಟಿ, ಡಾ. ಜೆ. ಎನ್. ಭಟ್, ಡಾ. ಬಿ. ಭಾಸ್ಕರ ರಾವ್, ವಿ. ಗುಂಡಿಬೈಲ್ ಸುಬ್ರಹ್ಮಣ್ಯ ಭಟ್, ಶ್ರೀ ಹರಿಪ್ರಸಾದ್ ಭಟ್, ಡಾ. ರಂಜಿತ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ತಮ್ಮ ಅಪೂರ್ವ ಅನುಭವಗಳನ್ನು ಹಂಚಿಕೊಂಡರು.
ಚೆನ್ನೈನ ಕೆ. ಅಣ್ಣಾಮಲೈಯವರು ಪ್ರತೀ ವರ್ಷ ನೀಡುತ್ತಿರುವ ರೂ. 25000/- ನೆರವನ್ನು ಬೈಂದೂರು ಸರಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯಧಿಕ ಅಂಕಗಳಿಸಿದ ನಾಲ್ವರು ವಿದ್ಯಾರ್ಥಿನಿಯರಿಗೆ ವಿತರಿಸಲಾಯಿತು. ಯು. ಉಪೇಂದ್ರ ಅವರ ನೆನಪಿನಲ್ಲಿ ಉತ್ತಮ ಕಡತ ನಿರ್ವಹಣೆಗೆ ನೀಡುವ ಹಾಗೂ ಅಕ್ಷತಾ ದೇವಾಡಿಗ ಇವಳ ಸ್ಮರಣಾರ್ಥ ಉತ್ತಮ ಪತ್ರ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಎಸ್. ವಿ. ಭಟ್ ಶ್ರೀಗಳಿಗೆ ಫಲಸಮರ್ಪಿಸಿದರು. ಅಶೋಕ್ ಎಂ. ವಂದಿಸಿದರು. ಜೊತೆಕಾರ್ಯದರ್ಶಿ ನಾರಾಯಣ ಎಮ್. ಹೆಗಡೆ ನಿರೂಪಿಸಿದರು.

whatsapp image 2024 09 30 at 10.38.50 pm

whatsapp image 2024 09 30 at 10.38.52 pm

whatsapp image 2024 09 30 at 10.38.35 pm

Sponsors

Related Articles

Back to top button