ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಕಾರ್ಯಾಗಾರ…

ಬಂಟ್ವಾಳ: ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು” ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಶ್ರೀ ತುಕರಾಂ ಪೂಜಾರಿ ಬಂಟ್ಟಾಳ ಇವರು ಹೇಳಿದ್ದಾರೆ.
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಭಾಗವಹಿಸಿ, ಮಾತನಾಡಿದರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ” ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು. ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಸ್ವಾಗತಿಸಿದರು. ಗೌರವ ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Sponsors

Related Articles

Back to top button