ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಪುರಸ್ಕಾರ…

ಸುಳ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ0ತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಪುರಸ್ಕಾರ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲನ್ ಮುಗಿಲನ್ ಅವರು ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಶಾಶ್ವತ ಫಲಕ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸ್ವಚ್ಛತಾ ಸಹಾಯಕಿಯರಾದ ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ಶಾಲಿನಿ ಮತ್ತು ಶ್ರೀಮತಿ ಜಲಜಾಕ್ಷಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.